ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂನ್ 27ರಿಂದ ಜುಲೈ 4ರವರೆಗೆ ನಡೆಯಲಿದೆ.
ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮೂಲಕ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಅಥವಾ ಕಾಲೇಜು ಆಡಳಿತ ಮಂಡಳಿ ಪ್ರವೇಶ ಪತ್ರವನ್ನು ನೇರವಾಗಿ ವಿದ್ಯಾರ್ಥಿಗಳಿಗೆ ನೀಡಬಹುದು.ಹೆಚ್ಚಿನ ಮಾಹಿತಿಗೆ ಇಲಾಖೆ ವೆಬ್ ಸೈಟ್ https://sslc.karnataka.gov.in/storage/pdf-files/June_2022_Sup_exam_TimeTable.pdf ನ್ನು ಸಂಪರ್ಕಿಸಬಹುದು.
Follow us on Social media