ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್ ಅವರು ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.
ಶುಕ್ರವಾರ ಸಂಜೆಯೇ ನೂತನ ಕಮಿಷನರ್ ಅಧಿಕಾರ ಸ್ವೀಕರಿಸುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಕಮಿಷನರ್ ಕಚೇರಿಯಲ್ಲಿ ಸಕಲ ಸಿದ್ಧತೆಗಳೂ ನಡೆದಿದ್ದವು. ಆದರೆ ಕೊನೇ ಗಳಿಗೆಯಲ್ಲಿ ಅಧಿಕಾರ ಹಸ್ತಾಂತರ ಶನಿವಾರಕ್ಕೆ ಮುಂದೂಡಲ್ಪಟ್ಟಿತು.
ಇಂದು ಬೆಳಗ್ಗೆ 11 ಗಂಟೆಗೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು, ಭಾಸ್ಕರ್ ರಾವ್ ಅವರು ಕಮಲ್ ಪಂಥ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಭಾಸ್ಕರ್ ರಾವ್ ಮತ್ತು ಕಮಲ್ ಪಂತ್ ಒಂದೇ ಬ್ಯಾಚಿನ ಅಧಿಕಾರಿಗಳಾಗಿರುವುದು ಮಾತ್ರವಲ್ಲದೆ ಇಬ್ಬರೂ ಆಪ್ತ ಸ್ನೇಹಿತರಾಗಿದ್ದಾರೆ. ಬೆಂಗಳೂರು ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕನ್ನಾಗಿ ಮಾಡಲಾಗಿದೆ.
Follow us on Social media