ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಶೀಘ್ರವೇ ನೂತನ ಆಯುಕ್ತರ ನೇಮಕವಾಗುವ ಸಾಧ್ಯತೆಯಿದೆ, ಆಗಸ್ಟ್ 2 ಕ್ಕೆ ಭಾಸ್ಕರ್ ರಾವ್ ಅವರ ಒಂದು ವರ್ಷ ಅವಧಿ ಮುಗಿಯುವುದರಿಂದ ಕಮಲ್ ಪಂಥ್ ನೇಮಕ ಸಾಧ್ಯತೆಯಿದೆ.
ಭಾಸ್ಕರ್ ರಾವ್ ಅವರ ಬ್ಯಾಚ್ ಮೇಟ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ರಾಜ್ಯ ಗುಪ್ತಚರ ಇಲಾಖೆ ಹೆಚ್ಚುವರಿ ಎಡಿಜಿಪಿ ಕಮಲ್ ಪಂತ್ ನೇಮಕ ಮಾಡುವ ಸಾಧ್ಯತೆ ಇದೆ. ರಾವ್ ಮತ್ತು ಪಂಥ್ 1990 ರ ಐಪಿಎಸ್ ಬ್ಯಾಚ್ ನವರು.
ನಗರ ಪೊಲೀಸ್ ಆಯುಕ್ತ ಹುದ್ದೆಗೆ ಮೂವರು ಅಧಿಕಾರಿಗಳು ಮುಂಚೂಣಿಯಲ್ಲಿದ್ದಾರೆ, ಪಂಥ್ ಅವರ ಜೊತೆಗೆ ಸುನೀಲ್ ಅಗರ್ ವಾಲ್ ಮತ್ತು ಅಮೃತ್ ಪೌಲ್ ಕೂಡ ಆಕಾಂಕ್ಷಿಗಳಾಗಿದ್ದಾರೆ.
ಅಮೃತ್ ಪೌಲ್ ಅವರನ್ನು ಇದೇ ವರ್ಷದ ಜನವರಿ ಅಂತ್ಯದಲ್ಲಿ ಎಡಿಜಿಪಿಯಾಗಿ ಬಡ್ತಿ ನೀಡಲಾಗಿತ್ತು. ಕಮಿಷನರ್ ಅವರ ಜೊತೆಗೆ ನಗರದ ಮತ್ತಷ್ಟು ಹಿರಿಯ ಅಧಿಕಾರಿಗಳ ವರ್ಗಾವಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಪಿ.ಎಸ್. ಸಂಧು (1989) ಆಗಸ್ಟ್ 1 ರಂದು ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಬಡ್ತಿ ಪಡೆಯಲಿದ್ದಾರೆ.
Follow us on Social media