ಬೆಂಗಳೂರು: ಶೈಕ್ಷಣಿಕವಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ನಿಯೋಗವು ಉಪ ಮುಖ್ಯ ಮಂತ್ರಿ ಡಾ.ಅಶ್ವತ್ಥ ನಾರಾಯಣ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿತು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ತೆಗೆದುಕೊಂಡಿರುವ ನಿರ್ಧಾರವನ್ನು ಅವರಿಗೆ ತಿಳಿಸಿದರು.ಇದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ಸರ್ಕಾರಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಮನವಿ ಮಾಡಿರುವ ಬಗ್ಗೆ ಮಾಹಿತಿ ನೀಡಿದರು.
ಉಪಮುಖ್ಯಮಂತ್ರಿ ಡಾ .ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿ ವಿದ್ಯಾರ್ಥಿಗಳಿಗೆ ಆಗುವ ಸಮಸ್ಯೆಗಳನ್ನು ಹೇಳಿ ಅವರಿಗೆ ಆನ್ಲೈನ್ ಶಿಕ್ಷಣದ ತರಗತಿಗಳು ಹೇಗೆ ಆಗುತ್ತಿದೆ ಎಂದು ಮಾಹಿತಿಗಳನ್ನು ನೀಡಿದರು .ವಿದ್ಯಾರ್ಥಿಗಳ ಮೊದಲ ಆದ್ಯತೆ 3 ತಿಂಗಳು ಆಫ್ಲೈನ್ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸುವುದಾಗಿ ಅಥವಾ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ನೋಡಿ ಅವರನ್ನು ಮುಂದಿನ ತರಗತಿಗೆ ನೇರವಾಗಿ ಪ್ರೊಮೋಟ್ ಮಾಡಿ ಎಂದು ಮನವಿ ಮಾಡಿದರು.ಶಿಕ್ಷಣ ಶುಲ್ಕವನ್ನು ಪಾವತಿಸಲು ಸೆಪ್ಟೆಂಬರ್ ತಿಂಗಳವರೆಗೆ ಕಾಲಾವಕಾಶವನ್ನು ನೀಡಬೇಕೆಂದು ವಿದ್ಯಾರ್ಥಿಗಳ ಪರವಾಗಿ ಮನವಿ ಮಾಡಿದರು.
ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಅನ್ವಿತ್ ಕಟೀಲ್ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.
Follow us on Social media