ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಶೇಖ್ ಸಲ್ಮಾನ್, ಶಫೀಕ್ ಹಾಗೂ ಸಲ್ಮಾನ್ ಫರೀಸ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಓರ್ವ ಆರೋಪಿ ರೌಡಿ ಶೀಟರ್ ಎಂದು ತಿಳಿದು ಬಂದಿದೆ.
ಮೂವರೂ ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಸಂಪಾದಿಸುವ ಉದ್ದೇಶದಿಂದ ಕೇರಳದಿಂದ ಎಂಡಿಎಂಎ, ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗುತ್ತಿದೆ.
ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ದಂಧೆಯಲ್ಲಿ ತೊಡಗಿದ್ದಾಗ ಖಚಿತ ಮಾಹಿತಿ ಆಧರಿಸಿದ ಸಿಸಿಬಿ ಮಾದಕ ನಿಗ್ರಹ ದಳ ಆರೋಪಿಗಳನ್ನ ಬಂಧಿಸಿದೆ.
ಬಂಧಿತ ಆರೋಪಿಗಳಿಂದ 10 ಲಕ್ಷ ರೂ ಮೌಲ್ಯದ 11 ಗ್ರಾಂ ಎಂಡಿಎಂಎ, 6 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ 1 ಕಾರು, 3 ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media