ಬೆಂಗಳೂರು: ಅಪಘಾತಕ್ಕೀಡಾಗಿದ್ದ ಮುಖ್ಯ ಪೊಲೀಸ್ ಪೇದೆ ನಾಗೇಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರವಿವಾರ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ಆಟೋವನ್ನು ನಾಗೇಶ್ ಅವರು ಟೋಯಿಂಗ್ ಮಾಡಿಕೊಂಡು ಅದನ್ನು ಠಾಣೆಗೆ ತಾವೇ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು.
ಪರಿಣಾಮ ಅವರು ನೆಲಕ್ಕೆ ಬಿದ್ದಿದ್ದರಿಂದ ಅವರ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಸಾವನ್ನಪ್ಪಿದ್ದಾರೆ.
Follow us on Social media