ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ವಿದ್ಯಾರ್ಥಿಗಳ ಶುಲ್ಕವನ್ನು ಖಾಸಗಿ ಶಾಲೆಗಳು ಹೆಚ್ಚಿಸುವಂತಿಲ್ಲ ಎಂಬುವುದಾಗಿ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಸರಕಾರದ ಆದೇಶದಂತೆ 2020-21ನೇ ಸಾಲಿನಲ್ಲಿ ಶುಲ್ಕ ಪರಿಷ್ಕರಣೆ ಮಾಡುವಂತಿಲ್ಲ.
ಶಿಕ್ಷಣ ಇಲಾಖೆಯ ಆದೇಶದಂತೆ 2019-20ನೇ ಸಾಲಿನಲ್ಲಿ ಇದ್ದ ಶುಲ್ಕವನ್ನೇ ಮುಂದುವರೆಸುವಂತೆ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಶೇಖರ ಅವರು ಆದೇಶ ನೀಡಿದ್ದಾರೆ.
ಪ್ರಸ್ತುತ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತೆ ಮಾರ್ಚ್ 24ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜನರು ಉದ್ಯೋಗವಿಲ್ಲದೆ, ಹಣವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಜನರಿಗೆ ಮತ್ತಷ್ಟು ಸಂಕಷ್ಟ ನೀಡಬಾರದೆಂದು ಇಲಾಖೆ ಸೂಚಿಸಿದೆ.
ಪ್ರಸಕ್ತ ಸಾಲಿನಲ್ಲಿ ಬೋಧನಾ ಶುಲ್ಕವನ್ನು ಹೆಚ್ಚಿಸುವಂತಿಲ್ಲ. ಒಂದೊಮ್ಮೆ ಆದೇಶ ಮೀರಿದ್ದಲ್ಲಿ ಶಿಕ್ಷಣ ಕಾಯ್ದೆ 124(ಎ) ಅಡಿಯಲ್ಲಿ ಕ್ರಮಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ವಸೂಲಿ ಮಾಡಿದ್ದಲ್ಲಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.
Follow us on Social media