ಬೆಂಗಳೂರು : ಸಿದ್ದರಾಮೋತ್ಸವದಿಂದ ನಮಗೆ ಯಾವುದೇ ಭಯ ಇಲ್ಲ. ನಾವೂ ಸಹಕಾರ ಕೊಡುತ್ತೇವೆ. ಬೇಕಾದರೇ ಇನ್ನೂ 4-5 ಲಕ್ಷ ಜನರನ್ನು ನಾವೇ ಕಳುಹಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಿದ್ದರಾಮಯ್ಯನವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಹಮ್ಮಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮೋತ್ಸವದಿಂದ ನಮಗೆ ಯಾವುದೇ ಭಯ ಇಲ್ಲ. ಆದರೆ ಸಿದ್ದರಾಮೋತ್ಸವದಿಂದ ಭಯ ಆಗ್ತಿರೋದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಸಿದ್ದರಾಮೋತ್ಸವ ಕಾರ್ಯಕ್ರಮ ಶುರು ಮಾಡಿದ ನಂತರ ಡಿ.ಕೆ.ಶಿವಕುಮಾರ್ ನಿದ್ದೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರ ನಿದ್ದೆ ಕೆಡೆಸುತ್ತಿದ್ದಾರೆ. ಮುಂದಿನ ಸಿಎಂ ಎಂದು ಶಕ್ತಿಪ್ರದರ್ಶನ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದರು.
Follow us on Social media