ಬೆಳಗಾವಿ: ಹೊರವಲಯದ ಮಾರ್ಕಂಡೇಯ ನಗರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಂಗಳವಾರ ತಡರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಮೂಲತಃ ತಾಲ್ಲೂಕಿನ ಬೆಳಗುಂದಿಯವನಾದ ಈ ಬಾಲಕ, ಸಂಬಂಧಿಕರ ಮನೆಯಲ್ಲಿದ್ದುಕೊಂಡು ಸ್ಥಳೀಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ತಡರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಓದುವುದು ತಲೆಗೆ ಹತ್ತುತ್ತಿಲ್ಲ ಎನ್ನುತ್ತಿದ್ದ ಎಂದು ಪೋಷಕರು ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media