ಬೆಂಗಳೂರು : ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಾದ್ಯಂತ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
ವಾಯುಭಾರ ಕುಸಿತದಿಂದಾಗಿ ಮುಂದಿನ 2-3 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಕರಾವಳಿ ಮತ್ತು ರಾಜ್ಯದ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥಯೊಂದಕ್ಕೆ ತಿಳಿಸಿದ್ದಾರೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ, ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಹಾನಿ ಉಂಟಾಗಿದೆ.
ನದಿಗಳು ತುಂಬಿ ಹರಿಯುತ್ತಿದೆ. ಹಲವಾರು ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಧರಶಾಹಿಯಾಗಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಾಗಲಕೋಟೆಯಲ್ಲಿ ಡೋನಿ ನದಿಯು ಉಕ್ಕಿ ಹರಿಯುತ್ತಿದ್ದು ಸೇತುವೆಗಳ ಮೇಲೆ ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ. ನಿರಂತರ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ 130 ಮನೆಗಳಿಗೆ ಹಾನಿಯಾಗಿದೆ.ಈ ತಿಂಗಳು ಕೊಯ್ಲುಗಾಗಿ ಕಾಯುತ್ತಿದ್ದ ಬೆಳೆಗಳಿಗೆ ಸತತ ಮಳೆಯಿಂದಾಗಿ ಹಾನಿಯಾಗಿದ್ದು ರೈತರಿಗೆ ಭಾರೀ ನಷ್ಟ ಉಂಟಾಗಿದೆ.
ತೋಟಗಳಲ್ಲಿ ನೀರು ತುಂಬಿ ತರಕಾರಿಗಳು ಮತ್ತು ಹಣ್ಣುಗಳಿಗೆ ಹಾನಿಯಾಗಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೊಳೆಗಳು ತುಂಬಿ ಹರಿಯುತ್ತಿದೆ.ಮುಂದಿನ 48 ಗಂಟೆಗಳಲ್ಲಿ ಕರಾವಳಿ ಹಾಗೂ ಉತ್ತರ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Follow us on Social media