ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ.
ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಯ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಹೀಗೆ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತದೆ. ಯಾರೂ ಮೊಟ್ಟೆ ತಿನ್ನುವುದಿಲ್ಲವೋ ಅವರಿಗೆ ಬಾಳೆಹಣ್ಣನ್ನು ನೀಡಲಾಗುತ್ತದೆ.
ಕೆಲವು ಜಿಲ್ಲೆಗಳಲ್ಲಿ ಶೇಕಡಾ 70ಕ್ಕಿಂತಲೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ. 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ ಹಿನ್ನೆಲೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ನಿರ್ಧಾರ ಮಾಡಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.
ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
Follow us on Social media