ಬೆಂಗಳೂರು : ಸರ್ಕಾರದ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಇದರಿಂದ ಜನರ ನೆಮ್ಮದಿ ಕೆಡಿಸಿದಂತಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ ಸರ್ಕಾರ ಆತುರದ ನಿರ್ಧಾರ ಕೈಗೊಂಡಿದೆ. ಮದ್ಯ ಮಾರಾಟ ಮತ್ತು ಲಾಕ್‍ಡೌನ್ ಸಡಿಲಿಕೆಯಿಂದ ಅಪಾಯ ಹೆಚ್ಚಾಗುವ ಸಾಧ್ಯತೆಯಿದೆ. ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುತ್ತಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಕಾರ್ಮಿಕರ ಸಮಸ್ಯೆ ಉಂಟಾಗಿ ಕಾಮಗಾರಿಗಳ ವೇಗ ಕುಂಠಿತವಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.
Follow us on Social media