ಬೆಂಗಳೂರು: ಕ್ಯಾನ್ಸರ್ನಿಂದ ಬಳಲುತ್ತಿರುವ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರಡು ವರ್ಷದಿಂದ ಕ್ಯಾನ್ಸರ್ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿದ್ದು ಸಾವು ನೋವಿನ ಮಧ್ಯೆ ಹೋರಾಡುತ್ತಿರುವ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಭೂಗತ ಲೋಕವನ್ನು ತೊರೆದು ಹಲವು ವರ್ಷಗಳಿಂದ ಜಯ ಕರ್ನಾಟಕ ಸಂಘಟನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. 2013ರಲ್ಲಿ ಇವರ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. 2018ರಲ್ಲಿ ಇವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ಇತ್ತೀಚೆಗೆ ಸುದ್ದಿಗೋಷ್ಠಿ ಕರೆದು ಸ್ವತಃ ಅವರೇ ಕ್ಯಾನ್ಸರ್ ಬಗ್ಗೆ ಹೇಳಿಕೊಂಡಿದ್ದರು.
Follow us on Social media