ಬೆಂಗಳೂರು: ರಾಜ್ಯದಾದ್ಯಂತ ಗುರುವಾರ ಮಾಸ್ಕ್ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದಿಂದ ಕಬ್ಬನ್ ಪಾರ್ಕ್ ವರೆಗೂ ಕಾಲ್ನಡಿಗೆ ಮೂಲಕ ಕೊರೋನಾ ವೈರಸ್ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಿದ್ದಾರೆ.
ಕಾಲ್ನಡಿಗೆ ವೇಳೆ ಕೊರೋನಾ ವಿರುದ್ಧ ಹೋರಾಡಲು ಮಾಸ್ಕ್ ಎಷ್ಟು ಮುಖ್ಯ ಎಂಬುದನ್ನು ಜನತೆಗೆ ತಿಳಿಸಲಿದ್ದಾರೆಂದು ತಿಳಿದುಬಂದಿದೆ.
ಎಲ್ಲಾ ಜಿಲ್ಲೆಗಳಲ್ಲೂ ಮಾಸ್ಕ್ ದಿನವನ್ನು ಆಚರಿಸಲಾಗುತ್ತಿದ್ದು, ಪಾದಯಾತ್ರೆ ವೇಳೆ ಮಾಸ್ಕ್ ಧರಿಸುವುದು ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಮೂಲಕ ಕೋವಿಡ್-19 ನಿಯಂತ್ರಣ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
Follow us on Social media