ರಾಯಚೂರು: ಸಾರಿಗೆ ನೌಕರರು ಮುಷ್ಕರ ಕೈಬಿಟ್ಟುಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ, ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರದ ವಿಚಾರದಲ್ಲಿ ಯಾರನ್ನೂ ಮಾತುಕತೆಗೆ ಆಹ್ವಾನಿಸುವುದಿಲ್ಲ ಮತ್ತು ಈ ವಿಚಾರದಲ್ಲಿ ಯಾವ ರಾಜಿಯೂ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.
ನೌಕರರು ಗೌರವದಿಂದ ಕೆಲಸಕ್ಕೆ ಬರಬೇಕು. ಬಸ್ ಸಂಚಾರ ಮಾಡದೆ ಹೋದರೆ ಮುಂದೆ ಆಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ ಎಂದರು.
ಕೊರೊನಾ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಚರ್ಚಿಸಿದ್ದಾರೆ. ಹೆಚ್ಚು ಪ್ರಕರಣಗಳಿರುವ ಕಡೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನ ಕೂಡ ಸಹಕರಿಸಬೇಕು. ಇದೇ 17ರಂದು ಜನ ನೀಡುವ ತೀರ್ಪು ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸ್ಪಷ್ಟ ಸಂದೇಶ ನೀಡಲಿದೆ ಎಂದು ಯಡಿಯೂರಪ್ಪ ತಿರುಗೇಟು ನೀಡಿದರು.
Follow us on Social media