ಮೈಸೂರು: ಅಕ್ರಮವಾಗಿ ಹುಲಿ ಚರ್ಮ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಾಹನವೊಂದರಲ್ಲಿದ್ದ ಸುಮಾರು 3.15 ಮೀಟರ್ ಉದ್ದದ ಹುಲಿ ಚರ್ಮವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಬಂಧಿತರನ್ನು ಶೀರಂಗಪ್ಟಣ ತಾಲೂಕಿನ ಕೆ ಆರ್ ಎಸ್ ಸಮೀಪದ ಸಂತೇಮಾಳದ ಆಕಾಶ್ ರಾವ್, ವಿಣ್ಣು ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿಯ ಮೇರೆಗೆ, ಕೆಆರ್‌ಎಸ್‌ನಿಂದ ಮೈಸೂರಿಗೆ ಬರುತ್ತಿದ್ದ ಕಾರನ್ನು ಪರಿಶೀಲಿಸಿದಾಗ, ವಾಹನದೊಳಗೆ ಹುಲಿ ಚರ್ಮ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ.
Follow us on Social media