ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 53 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೋನಾ ಸೋಂಕು ಪತ್ತೆಯಾದ ನಂತರ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ.
ಬೆಂಗಳೂರು ನಗರ 3, ಬೆಳಗಾವಿ 22, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ, ದಾವಣಗೆರೆ ತಲಾ 1, ಕಲಬುರಗಿ 3, ಶಿವಮೊಗ್ಗ 8, ಬಾಗಲಕೋಟೆಯಲ್ಲಿ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಜೊತೆಗೆ, ಶನಿವಾರ ಸಂಜೆ ಬೆಂಗಳೂರು ನಗರ ನಿವಾಸಿಯಾಗಿದ್ದ 56 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.
Follow us on Social media