ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 70 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 613ಕ್ಕೇರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 23 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 70 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1533 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 2798 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36,216ಕ್ಕೇರಿಕೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶನಿವಾರ ಒಂದೇ ದಿನ 880 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸುಧಾಕರ್ ತಿಳಿಸಿದ್ದಾರೆ.
Follow us on Social media