ಬೆಂಗಳೂರು: ಕರ್ನಾಟಕದಲ್ಲಿ ಬೆಳಗ್ಗೆ 19 ಪ್ರಕರಣ ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಆದರೆ ಸಂಜೆ ವೇಳೆಗೆ ಒಂದೇ ಒಂದು ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ.
ಇಂದು ಬೆಳಗ್ಗೆ ಬಾದಾಮಿಯಲ್ಲಿ ಒಂದೇ ದಿನ 12 ಪ್ರಕರಣಗಳು ಪತ್ತೆಯಾಗಿತ್ತು. ಇದರೊಂದಿಗೆ ರಾಜ್ಯದಲ್ಲಿ ಇಂದು ಹೊಸದಾಗಿ 19 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿತ್ತು. ಈ ಮೂಲಕ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿತ್ತು. ಇದೀಗ ಸಂಜೆ ವೇಳೆಗೆ ಒಂದೇ ಒಂದು ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಮಾಹಿತಿ ನೀಡಿದೆ.
ಸದ್ಯ ವಿಜಯಪುರದಲ್ಲಿ 35 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ವಿಜಯಪುರದಲ್ಲಿ ಸೋಂಕಿತರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.
607ನೇ ರೋಗಿಯ ಸಂಪರ್ಕಕ್ಕೆ ಬಂದಿದ್ದ 10 ಹಾಗೂ 15 ವರ್ಷದ ಬಾಲಕ ಸೇರಿ 45, 26, 47, 23, 32, 30 ವರ್ಷದ ವ್ಯಕ್ತಿಗಳು, 18 ವರ್ಷದ ಯುವತಿ, 55 ವರ್ಷದ ವೃದ್ಧೆ, 30 ವರ್ಷದ ಮಹಿಳೆ, 40 ವರ್ಷದ ಮಹಿಳೆ,16 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ.
ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 693ಕ್ಕೇರಿಕೆಯಾಗಿವೆ. ಒಟ್ಟು 30 ಮಂದಿ ಮೃತಪಟ್ಟಿದ್ದು, 345 ಜನರು ಚೇತರಿಕೆ ಕಂಡಿದ್ದಾರೆ.
Follow us on Social media