ಬೆಂಗಳೂರು: ಕರ್ನಾಟಕದಲ್ಲಿ ಇಂದು ದಾಖಲೆಯ 6,259 ಕೊರೋನಾ ಸೋಂಕು ಪತ್ತೆಯಾಗಿದ್ದು ಕೊರೋನಾಘಾತದ ನಡುವೆ ದಾಖಲೆಯ 6,777 ಮಂದಿ ಡಿಸ್ಚಾರ್ಚ್ ಆಗಿದ್ದಾರೆ.
ಇಂದು ರಾಜ್ಯದಲ್ಲಿ ಹೊಸದಾಗಿ 6,259 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 110 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 2,704ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು ಸಹ 2,035 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಬೆಂಗಳೂರಿನಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ.
ಒಟ್ಟಾರೆ 1,45,830 ಕೊರೋನಾ ಪ್ರಕರಣಗಳ ಪೈಕಿ 69,272 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 73,846 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow us on Social media