ಬೆಂಗಳೂರು: ರಾಜ್ಯದಲ್ಲಿ ಮೇಲ್ಮೈ ಸುಳಿಗಾಳಿಯಿಂದ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿಲ್ಲ. ಗ್ರಾಮೀಣ ಭಾಗದ ಕೆಲವು ಕಡೆ ತುಂತುರು ಮಳೆಯಾಗಿದೆ. ಇದರ ಪರಿಣಾಮ ಬಿಸಿಲು, ಸೆಕೆ ವಿಪರೀತ ಏರಿಕೆ ಕಂಡಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ, ವಿಠಲಾಪೂರ ಗ್ರಾಮಗಳಲ್ಲಿ ಬುಧವಾರ ರಾತ್ರಿ ಜೋರಾದ ಗಾಳಿ ಮತ್ತು ಆಲಿಕಲ್ಲು ಮಳೆಯಿಂದ ನೂರಾರು ಹೆಕ್ಟೇರ್ ಪ್ರದೇಶದಲ್ಲಿನ ಭತ್ತ, ಮಾವಿನಕಾಯಿ ಉದುರಿವೆ.
Follow us on Social media