Breaking News

ರಾಜ್ಯದಲ್ಲಿ ಉಲ್ಭಣವಾಗುತ್ತಿದೆ ಕೊರೋನಾ ಪ್ರಕರಣ, ಸಿಇಟಿ ಪರೀಕ್ಷೆ ಮುಂದೂಡಿ: ವಿದ್ಯಾರ್ಥಿಗಳಿಂದ ಹೆಚ್ಚುತ್ತಿದೆ ಬೇಡಿಕೆ

ಬೆಂಗಳೂರು/ಮೈಸೂರು: ಸಿಇಟಿ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆಯನ್ನು ಮುಂದೂಡಬೇಕೆಂಬ ಒತ್ತಾಯ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಹೆಚ್ಚಾಗುತ್ತಿದೆ.

ವೃತ್ತಿಪರ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ಈ ತಿಂಗಳ 30 ಮತ್ತು 31ರಂದು ನಿಗದಿಯಾಗಿದೆ. ಸರ್ಕಾರದ ನಿರ್ಧಾರವನ್ನು ವಿರೋಧಿಸಿ 52 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ #postponeKcet2020 ಹ್ಯಾಶ್ ಟಾಗ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ(ಎಐಡಿಎಸ್ಒ) ನಡೆಸಿರುವ ಸಮೀಕ್ಷೆಯಲ್ಲಿ ಶೇಕಡಾ 96.9ರಷ್ಟು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯಾದ್ಯಂತ ಕೋವಿಡ್-19 ಪ್ರಕರರಣಗಳು ಹೆಚ್ಚಾಗುತ್ತಿದ್ದು ಈ ಸಮಯದಲ್ಲಿ ಪರೀಕ್ಷೆ ನಡೆಸಿದರೆ ಅದು ಅವೈಜ್ಞಾನಿಕವಾಗುತ್ತದೆ. ಸಾವಿರಾರು ಮಂದಿ ವಿದ್ಯಾರ್ಥಿಗಳನ್ನು ಅಪಾಯದಲ್ಲಿರಿಸಿದಂತಾಗುತ್ತದೆ ಎಂದು ಪೋಷಕರು, ಜನಸಾಮಾನ್ಯರು ಹೇಳುತ್ತಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×