ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಶುಕ್ರವಾರ 5483 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 5483 ಹೊಸ ಪ್ರಕರಣಗಳು ವರದಿಯಾಗಿದ್ದು, 84 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 3130 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 2314 ಮಂದಿ ಸಾವನ್ನಪ್ಪಿದ್ದು, 72,005 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಕೋವಿಡ್ ಮಹಾಮಾರಿಯ ಆರ್ಭಟ ಎಂದಿನಂತೆ ಮುಂದುವರಿದಿದ್ದು, 2,220 ಹೊಸ ಪ್ರಕರಣಗಳು ವರದಿಯಾಗಿವೆ. ಅಲ್ಲದೆ ನಗರದಲ್ಲಿ ಇಂದು 20 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
Follow us on Social media