Breaking News

ರಾಜ್ಯದಲ್ಲಿ ಕೊರೋನಾಘಾತ: 24 ಗಂಟೆಗಳಲ್ಲಿ 45 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 45 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. 

ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾಹ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 45 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಈ ನಡುವೆ ಮಹಾಮಾರಿ ವೈರಸ್’ಗೆ ರಾಜ್ಯದಲ್ಲಿ 30 ಮಂದಿ ಬಲಿಯಾಗಿದ್ದು, 370 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ತಿಳಿಸಿದೆ. 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×