ಬೆಂಗಳೂರು: ಮಹಾಮಾರಿ ಕೊರೋನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 91 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 36 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 91 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು
ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2156 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4120 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೇರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1290 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 23,065 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 39,370 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 24,316 ಸಕ್ರಿಯ ಪ್ರಕರಣಗಳಿವೆ.
Follow us on Social media