ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಇಂದು 2,298 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,75,955ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 12 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,461ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 1,398 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,21,236ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 995 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,46,589ಕ್ಕೆ ಏರಿಕೆಯಾಗಿದೆ. ಇನ್ನು 16,886ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 143 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow us on Social media