ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮಿತಿ ಮೀರುತ್ತಿದ್ದು ಕಳೆದ ೨೪ ಗಂಟೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು, ತೀವ್ರ ಆತಂಕ ಸೃಷ್ಟಿಸಿದೆ. ನಿನ್ನೆಯಿಂದ ಇಂದು (ಬುಧವಾರ) ಸಂಜೆವರೆಗೆ 2062 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 28,877 ತಲುಪಿದೆ. ಅಲ್ಲದೆ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಸೋಂಕಿನಿಂದಾಗಿ 54 ಮಂದಿ ಸಾವನ್ನಪ್ಪಿದ್ದಾರೆ. ಇದು ಕೊರೋನಾ ಪ್ರಾರಂಭವಾದಂದಿನಿಂದ ರಾಜ್ಯದಲ್ಲಿ ಒಂದೇ ದಿನ ಸಂಭವಿಸಿದ ಸಾವಿನ ಪ್ರಮಾಣದ ಅತಿ ದೊಡ್ಡ ಸಂಖ್ಯೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 1148 ಪ್ರಕರಣಗಳು ವರದಿಯಾಗಿದ್ದರೆ ಒಟ್ಟು ಸಂಖ್ಯೆ 12,509ಕ್ಕೆ ಏರಿಕೆಯಾಗಿದೆ. ಅಲ್ಲದೆ ದಕ್ಷಿಣ ಕನ್ನಡ 183, ಧಾರವಾಡ 89, ಕಲಬುರಗಿ 66, ಬಳ್ಳಾರಿ 59 ಹಾಗೂ ಮೈಸೂರು ಜಿಲ್ಲೆಯಲ್ಲಿ 59 ಜನರಿಗೆ ಕೊರೋನಾ ದೃಢವಾಗಿದೆ. ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಇಂದು ವರದಿಯಾಗಿಲ್ಲ.
ರಾಜ್ಯದಲ್ಲಿ ಇದುವರೆಗೆ ಒಟ್ಟು 470 ಮಂದಿ ಕೊರೋನಾಗೆ ಬಲಿಯಾಗಿದ್ದರೆ ಇಂದಿನ 778 ಜನ ಸೇರಿ 11,876 ಮಂದಿ ಚೇತರಿಸಿಕೊಂಡಿದ್ದಾರೆ.
Follow us on Social media