ಬೆಂಗಳೂರು: ಇಲ್ಲಿಯವರೆಗಿನ ಎಲ್ಲ ದಾಖಲೆಗಳನ್ನು ಕೊರೊನಾ ಇಂದು ಬ್ರೇಕ್ ಮಾಡಿದ್ದು, ರಾಜ್ಯದಲ್ಲಿ ಒಂದೇ ದಿನ 4,169 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 51,422ಕ್ಕೇರಿಕೆ ಆಗಿದೆ. ಇವತ್ತು 104 ಜನರನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ.
ಬೆಂಗಳೂರಿನಲ್ಲಿ ಸಹ ಕೊರೊನಾ ಸ್ಫೋಟವಾಗಿದ್ದು, ಒಂದೇ ದಿನ 2,344 ಪ್ರಕರಣಗಳು ವರದಿ ಆಗಿವೆ. ಒಟ್ಟಾರೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರದ ಗಡಿ ದಾಟಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಇದುವರೆಗೂ 1032 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿಯ ಕೊರೊನಾ ಮರಣ ನರ್ತನಕ್ಕೆ ಇವತ್ತು 70 ಮಂದಿ ಬಲಿಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ. ಇಡೀ ಬೆಂಗಳೂರನ್ನು ಕೊರೊನಾ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು 198 ವಾರ್ಡ್ ನಲ್ಲಿ 196 ವಾರ್ಡ್ ಗಳಲ್ಲಿ 50ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳಿವೆ.
Follow us on Social media