ಬೆಂಗಳೂರು: ಸಮಾಜದಲ್ಲಿ ಅಶಾಂತಿ ಮೂಡಿಸುವ, ಸಾಮಾಜಿಕ ಪಿಡುಗಾಗಿರುವ ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಪುನರುಚ್ಚರಿಸಿದ್ದಾರೆ.
ಲವ್ ಜಿಹಾದ್ ತಡೆಯಲು ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನು ತರಲು ಹೊರಟಿವೆ. ಹೀಗಾಗಿ ಅವುಗಳ ಅಧ್ಯಯನ ಮಾಡುವ ಜೊತೆಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ನಂತರ ಕಾನೂನು ತರುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
7-8 ವರ್ಷಗಳಿಂದ ದೇಶದಾದ್ಯಂತ ಚರ್ಚೆಯಾಗುತ್ತಿದೆ. ವಿಶೇಷವಾಗಿ 7-8 ರಾಜ್ಯಗಳಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಹೆಚ್ಚಿನ ಪ್ರಕರಣಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
Follow us on Social media