ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಜೂನ್. 21ರಂದು 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನುಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಜೂನ್. 21ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್ ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತಿಳಿಸಿದ್ದಾರೆ.
ಇನ್ನು ಜೂನ್. 21ರ ಮಂಗಳವಾರದಂದು ದಿನದ ಮೊದಲ ಒಂದೂವರೆ ಗಂಟೆಯ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗಣವಾದ ಯೋಗಾಸನಗಳ ಅಭ್ಯಾಸಗಳನ್ನು ಹಾಗೂ ಪ್ರದರ್ಶನಗಳನ್ನು ಹಮ್ಮಿಕೊಳ್ಳಲು ತಿಳಿಸಿದೆ.
Follow us on Social media