ವಿಜಯಪುರ: ಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸಲಾಗಿದೆ. ಕೊರೋನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ.
ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡುವ ಪ್ರಸ್ತಾವನೆಯೇ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಬಿಎಂಟಿಸಿ ಬಸ್ ದರ ಶೇಕಡ 18ರಷ್ಟು ಹೆಚ್ಚು ಮಾಡಲು ಗಂಭೀರ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದ್ದು ಇದರ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಮಾಡಲಿದ್ದಾರೆ ಎಂದೂ ಸಚಿವರು ಈ ಮೊದಲು ಹೇಳಿದ್ದರು.
Follow us on Social media