ಶಿವಮೊಗ್ಗ: ದೇಶದಲ್ಲಿ ನಿಷೇಧಿತವಾಗಿರುವ ಭಯೋತ್ಪಾದಕ ಸಂಘಟನೆ ನಂಟನ್ನು ಹೊಂದಿರುವ ಆರೋಪದಲ್ಲಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡ ಆರೋಪಿಗಳ ಮೇಲೆ ಬಲೆ ಬೀಸಿದೆ.
ಇಬ್ಬರನ್ನು ಈಗಾಗಲೇ ಬಂಧಿಸಿದ್ದು ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಸುತ್ತಿದೆ.
ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್ (21) ಬಂಧಿತ ಆರೋಪಿಗಳು.ತೀರ್ಥಹಳ್ಳಿಯ ಸೊಪ್ಪಿಗುಡ್ಡೆ ನಿವಾಸಿ ಶಾರೀಕ್ ಮತ್ತು ಆತನ ಸಹಚರರಾದ ಮಾಜ್ ಮುನೀರ್ ಅಹಮ್ಮದ್ ಹಾಗೂ ಸಯ್ಯದ್ ಯಾಸೀನ್ ನಿಷೇಧಿತ ಭಯೋತ್ಪಾದಕ ಸಂಘಟನೆ ನಂಟನ್ನು ಹೊಂದಿದ್ದು, ಈ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ವಶ ಮಾಡಿ ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಿದ್ದಾರೆ.
Follow us on Social media