ಬೆಂಗಳೂರು : 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ.14ರಿಂದ ಶಾಲೆ ಆರಂಭವಾಗಲಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನುಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು, ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಸಂಯೋಜಿಸಿ, ವಾರ್ಷಿಕ ಕಾರ್ಯಸೂಚಿಯನ್ನು ತಯಾರಿಸಲಾಗಿದೆ ಎಂದು ಹೇಳಿದೆ.
ಇನ್ನು 2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ಮೇ 14ರಿಂದ ಶಾಲೆ ಪ್ರಾರಂಭ ಮತ್ತು ಪ್ರಾರಂಭೋತ್ಸವದ ಪೂರ್ವ ಸಿದ್ಧತೆ ಆರಂಭಗೊಳ್ಳಲಿದೆ. ಅಕ್ಟೋಬರ್ 03 ರಿಂದ ಅಕ್ಟೋಬರ್ 16ರವರೆಗೆ ದಸರಾ ರಜೆಯನ್ನು ಘೋಷಿಸಲಾಗಿದೆ.
Follow us on Social media