ಬೆಂಗಳೂರು: ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದವರ ಲೈಸನ್ಸ್ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ತುಮಕೂರು ಬಸ್ ಅಪಘಾತ ವಿಚಾರ ಕುರಿತು ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದ ಬಳಿ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿ, ಬಸ್ಸುಗಳಲ್ಲಿ ಈಗಾಗಲೇ ಓವರ್ ಲೋಡ್ ಹಾಕುವುದಕ್ಕೆ ಕಾನೂನು ಇದೆ. ಆದರೂ ಸರ್ಕಾರದ ಕಣ್ಣು ತಪ್ಪಿಸಿ ಓವರ್ ಲೋಡ್ ಹಾಕುತ್ತಿರುವುದು ಕಂಡುಬಂದಿದೆ. ಹೀಗಾಗಿ, ಕಾನೂನು ಉಲ್ಲಂಘಿಸುತ್ತಿರುವವರ ವಿರುದ್ಧ ಇನ್ನಷ್ಟು ಕಠಿಣ ಕಾನೂನು ಮಾಡುತ್ತೇವೆ, ರೂಲ್ಸ್ ಬ್ರೇಕ್ ಮಾಡಿದರೆ ಅಂತಹವರ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ತಿಳಿಸಿದರು.
ತುಮಕೂರು ಬಸ್ ಅಪಘಾತದಲ್ಲಿನ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಬಹಳ ಜನರು ಗಾಯಗೊಂಡಿದ್ದಾರೆ. ಹಾಗಾಗಿ ಸ್ವಲ್ಪ ತೊಂದರೆ ಆಗಿದೆ. ಅವಶ್ಯಕತೆ ಬಿದ್ದರೆ ಬೆಂಗಳೂರಿಗೆ ಗಾಯಳುಗಳನ್ನು ಕಳಿಸಲಾಗುತ್ತದೆ. ಅದಕ್ಕೆ ಸೂಚನೆ ಕೂಡ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Follow us on Social media