ಬೆಂಗಳೂರು: ಸರ್ಕಾರ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವುದರಿಂದ ಜನರಲ್ಲಿ ಆತಂಕ ಹಾಗೂ ಗೊಂದಲ ಹೆಚ್ಚಾಗಿದೆ. ಹೀಗಾಗಿ ಅವರು ಬೆಂಗಳೂರು ತೊರೆ ದು ಹಳ್ಳಿಗಳತ್ತ ಸಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತೆ ಲಾಕ್ ಡೌನ್ ಮಾಡುತ್ತಿರುವ ವಿಚಾರದ ಬಗ್ಗೆ ನಾವು ಮಾತನಾಡುವುದಿಲ್ಲ. ಸರ್ಕಾರದ ಆಡಳಿತ ಕಾರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ.
ಕೋವಿಡ್ ಪಿಡುಗನ್ನು ಪಕ್ಷಾತೀತವಾಗಿ ಎದುರಿಸಬೇಕು ಎಂದು ನಾವು ಆರಂಭ ದಿಂದಲೂ ಹೇಳುತ್ತಲೇ ಬಂದಿದ್ದೇವೆ. ಆದರೆ ಬಿಜೆಪಿ ಈ ವಿಚಾರದಲ್ಲೂ ತಮ್ಮ ರಾಜಕೀಯ ಸಾಧಿಸುತ್ತಿದ್ದಾರೆ.ಅವರು ನಮ್ಮನ್ನು ಕರೆದು ಚರ್ಚಿಸಿದರೆ ನಾವು ಈ ಬಗ್ಗೆ ಮಾತನಾಡುತ್ತೇವೆ ಎಂದರು.
ರಾಜ್ಯ ಸಚಿವರಗಳ ಮಾತುಗಳನ್ನು ನಾವು ಗಮನಿಸುತ್ತಿದ್ದೇವೆ. ಉಪಮುಖ್ಯಮಂತ್ರಿಗಳು ತಮ್ಮ ಪಕ್ಷದ ಕಾರ್ಯಕರ್ತರನ್ನು ಸ್ವಯಂ ಸೇವಕರಾಗಿ ನೇಮಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಈ ವಿಚಾರವಾಗಿ ನಾನು ಸಿಎಂಗೆ ಪತ್ರ ಬರೆದಿದ್ದು ನಮ್ಮ ಕಾರ್ಯಕರ್ತರು ಆರಂಭದಿಂದ ಜನರ ಸೇವೆ ಮಾಡುತ್ತಿದ್ದು ಸರ್ಕಾರದ ಜತೆಗೂಡಿ ಕೆಲಸ ಮಾಡಲು ಸಿದ್ಧ ಎಂದು ತಿಳಿಸಿದ್ದೇನೆ ಎಂದರು.
Follow us on Social media