ಬೆಂಗಳೂರು : ಸಾರಿಗೆ ನೌಕರರ ವೇತನ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಬಳದಲ್ಲಿ ಯಾವುದೇ ಕಡಿತ ಮಾಡಿಲ್ಲ. ನಮ್ಮ ಸಾರಿಗೆ ನೌಕರರಿಗೂ ಸಂಬಳ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ಇನ್ನು ಎರಡು ದಿನದಲ್ಲಿ ಸಂಪೂರ್ಣವಾದ ವೇತನ ನೀಡುವ ಕುರಿತು ಚಿಂತನೆ ನಡೆಸುತ್ತಾ ಇದ್ದೇವೆ ಎಂದು ತಿಳಿಸಿದರು.
ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆ ಹಿನ್ನೆಲೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ್ದ ಲಕ್ಷ್ಮಣ ಸವದಿ, ಅಗತ್ಯ ಬಿದ್ದಲ್ಲಿ ಇನ್ನು ಒಂದು ದಿನ ಉಚಿತ ಬಸ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.