ಬೆಂಗಳೂರು : ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿರುವವರೆಗೆ ಸಾಲಗಾರರ ಆಸ್ತಿಪಾಸ್ತಿ ಅಥವಾ ವಾಹನಗಳ ಹರಾಜು ಪ್ರಕ್ರಿಯೆ ನಡೆಸುವಂತೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಆಸ್ತಿ ಹರಾಜು ಹಾಕಲು ಮುಂದಾದ ಬ್ಯಾಂಕ್ ಕ್ರಮ ಪ್ರಶ್ನಿಸಿ ಮುದ್ದಯ್ಯ ಅಮರಯ್ಯ ಹಿರೇಮಠ ಮತ್ತಿತರರು ಸಲ್ಲಿಸಿದ್ದ ಐದು ಪ್ರತ್ಯೇಕ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಕೊರೋನಾ ವೈರಸ್ ಸೋಂಕು ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಘೋಷಿಸಿರುವ ಈ ಸಂದರ್ಭದಲ್ಲಿ ಬ್ಯಾಂಕಿನವರು ನಮ್ಮ ಆಸ್ತಿ ಹರಾಜು ಮಾಡಲು ಮುಂದಾಗಿರುವುದು ಸರಿಯಲ್ಲ. . ಹೀಗಾಗಿ ಹರಾಜು ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.