ಬೆಂಗಳೂರು : ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪನವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ.
ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗ ಲಕ್ಷಣಗಳಿಲ್ಲದಿದ್ದರೂ, ಮುನ್ನೆಚ್ಚರಿಕಾ ದೃಷಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಇನ್ನು ರವಿವಾರದಂದು ಮಧ್ಯಾಹ್ನದ ಸುಮಾರಿಗೆ ಬಿಜೆಪಿಯ ಹಿರಿಯ ಮುಖಂಡ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲೂ ಕೂಡ ಕೊರೊನಾ ಸೋಂಕು ದೃಢಪಟ್ಟಿತ್ತು.
Follow us on Social media