ಮೈಸೂರು : ಸಿದ್ದರಾಮಯ್ಯ ಅವರ ಹೆಸರು ಸುಳ್ಳಿನ ರಾಮಯ್ಯ ಅಂತ ಬದಲು ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಹಾನ್ ನಾಯಕ, ಹುಟ್ಟಿದಾಗಿನಿಂದಲೂ ಜಾತ್ಯಾತೀತ ಶಕ್ತಿಗಳನ್ನು ಬೆಳೆಸಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಇನ್ನು ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಲು ಸಿದ್ದರಾಮಯ್ಯ ಪ್ರಯತ್ನ ಮಾಡಿದ್ದರು.
12 ವರ್ಷದ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಮರುಜೀವ ಕೊಡಲು ಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ.ಸಿದ್ದರಾಮಯ್ಯಗೆ ನನ್ನ ಭಯ ಕಾಡುತ್ತಿದ್ದು, ಅದಕ್ಕೆ ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಬಿಜೆಪಿ ಭಯ ಇಲ್ಲ. ಎಲ್ಲಿ ನಾನು ಅಧಿಕಾರಕ್ಕೆ ಬಂದು ಬಿಡುತ್ತೇನೆ ಅನ್ನುವ ಭಯ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Follow us on Social media