ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ , ಡಾ. ಪರಮೇಶ್ವರ ರವರು , ಆರ್. ವಿ. ದೇಶಪಾಂಡೆ, ಕೆ. ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್ , ರಮೇಶಕುಮಾರ್ ಹಾಗು ಅನೇಕ ಕಾಂಗ್ರೆಸ್ ನಾಯಕರು ಫೋನ್ ಮೂಲಕ ನನ್ನ ಕುಟುಂಬ ಸದಸ್ಯರ ಯೋಗಕ್ಷೇಮವನ್ನು ವಿಚರಿಸಿ ಆತ್ಮಸ್ಥೈರ್ಯವನ್ನು ತುಂಬಿದ್ದಾರೆ.
ನಿಮಗೆಲ್ಲ ನನ್ನ ಕೃತಜ್ಞತೆಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುಧಾಕರ್ ಅವರ ಪತ್ನಿ ಮತ್ತು ಪುತ್ರಿಗೆ ಕೊರೊನಾ ಸೋಂಕು ತಗುಲಿದೆ. ಅದೇ ರೀತಿ ಅವರ ತಂದೆ ಹಾಗೂ ಮನೆಗೆಲಸದಾಳಿಗೂ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರು ಸ್ವಯಂ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಸಚಿವರ ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆಯ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.
Follow us on Social media