Breaking News

ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ: ಡಾ. ಸುಧಾಕರ್ ಟ್ವೀಟ್‌

ಬೆಂಗಳೂರು:  ಇದೇ ತಿಂಗಳ 19ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ದೇವೇಗೌಡ ಅವರು ಈಗಾಗಲೇ ನಾಮ ಪತ್ರ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹಿರಿಯರು ಇಬ್ಬರು ಅಖಾಡಕ್ಕಿಳಿಯುತ್ತಿರುವುದರಿಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೆ ಅವರು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.

ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ. ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ. ಆದರೆ, ಈ ಮುತ್ಸದ್ಧಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡುವ ಮೂಲಕ ಇಬ್ಬರ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×