ಹುಬ್ಬಳ್ಳಿ : ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧದ ಇ.ಡಿ ವಿಚಾರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಆಕ್ಷೇಪವಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇ.ಡಿ ವಿಚಾರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಆಕ್ಷೇಪವಿದ್ದರೆ ಕೋರ್ಟ್ ಮೊರೆ ಹೋಗಲಿ. ಅದು ಬಿಟ್ಟು ಕಾಂಗ್ರೆಸ್ಸಿಗರು ಬೀದಿಗಿಳಿದು ಹೋರಾಟ ಮಾಡುವುದು ನೋಡಿದರೆ, ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠರು ತಪ್ಪೆಸಗಿದ್ದು ಸ್ಪಷ್ಟವಾಗುತ್ತಿದೆ ಎಂದರು.ಇನ್ನು ಇ.ಡಿ ಕಾನೂನು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿಚಾರದಲ್ಲಿ ತಪ್ಪಾಗಿ ನಡೆದುಕೊಂಡಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲಿ. ಆದರೆ ಕಾಂಗ್ರೆಸ್ ನವರು ದೇಶಾದ್ಯಂತ ಬೀದಿಗಿಳಿದು ಹೋರಾಟದ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Follow us on Social media