ಹುಬ್ಬಳ್ಳಿ, : ಸಿದ್ದರಾಮಯ್ಯ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಓರ್ವ ಪುಂಡ ಪೋಕರಿ ಎಂದು ಟೀಕಿಸಿದ್ದಾರೆ.
ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂರಂತೆ ವರ್ತಿಸುತ್ತಿಲ್ಲ. ಬದಲಾಗಿ ಪುಂಡ, ಪೋಕರಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತನಂತೆ ಬಾಯಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಆರ್ ಎಸ್ ಎಸ್ ಚಡ್ಡಿ ಕುರಿತ ಸಿದ್ದರಾಮಯ್ಯ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಚಡ್ಡಿ ಹಾಕಿದ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಟ್ಟಾಗಿದೆ, ದೇಶ ಉಳಿದಿದೆ. ಅವರು ಆರ್ ಎಸ್ ಎಸ್ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದು ಎಂದುಕೊಂಡಿದ್ದಾರೆ. ಇದೇ ಸಿದ್ದರಾಮಯ್ಯಗೆ ತಿರುಗು ಬಾಣವಾಗುತ್ತೆ. ಪದೇ ಪದೇ ಆರ್ ಎಸ್ಎಸ್ ಬಗ್ಗೆ ಮಾತನಾಡುತ್ತಿದ್ದರೆ ಸಿದ್ದರಾಮಯ್ಯಗೆ ಉಳಿಗಾಲವಿಲ್ಲ. ಈಗಾಗಲೇ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗಿದೆ. ಸಿದ್ದರಾಮಯ್ಯನವರು ಇದನ್ನು ಅರಿತು ಮಾತನಾಡಬೇಕು. ಇಲ್ಲದಿದ್ದಲ್ಲಿ ಕಾಂಗ್ರೆಸ್ ಸರ್ವನಾಶ ಖಚಿತ ಎಂದು ಎಚ್ಚರಿಸಿದರು.
Follow us on Social media