ಬೆಂಗಳೂರು: ಕೆಲವು ಕಾಂಗ್ರೆಸ್ ನಾಯಕರಿಗೆ ಕೊರೋನಾ ಬಂದಿರುವ ಕಾರಣದಿಂದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎರಡು ವಾರಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಗಾಗಿರುವರು.
ಕಳೆದ ಕೆಲವು ದಿನಗಳಿಂದ ಡಿಕೆಶಿ ಅವರು ಹಲವಾರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿರುವರು. ಇದರಲ್ಲಿ ಕೆಲವರಿಗೆ ಈಗ ಕೊರೋನಾ ಪಾಸಿಟಿವ್ ಆಗಿದೆ. ಹೀಗಾಗಿ ಅವರು ಹೋಮ್ ಕ್ವಾರಂಟೈನ್ ಗೆ ಒಳಗಾಗಿರುವರು ಎಂದು ಕಾಂಗ್ರೆಸ್ ನ ಹಿರಿಯ ನಾಯಕರು ತಿಳಿಸಿದ್ದಾರೆ.
ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ ವೇಳೆ ವಿಧಾನಪರಿಷತ್ ನ ಮಾಜಿ ಸದಸ್ಯ ಐವನ್ ಡಿಸೋಜಾ ಅವರನ್ನು ಕೂಡ ಭೇಟಿ ಮಾಡಿದ್ದರು. ಐವನ್ ಅವರಿಗೂ ಕೊರೋನಾ ಪಾಸಿಟಿವ್ ಆಗಿದೆ.
Follow us on Social media