ನವದೆಹಲಿ: ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ವರ್ಷದ ಪರೀಕ್ಷೆಯನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ನಿರ್ಧರಿಸಿರುವ ಯುಜಿಸಿಯ ನಿರ್ಧಾರ ಪ್ರಶ್ನಿಸಿ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಮಹಾರಾಷ್ಟ್ರ ಸೇರಿದಂತೆ ದೇಶದಾದ್ಯಂತ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚುತ್ತಿದೆ ಮತ್ತು ಕೊರೋನಾ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ಯುಜಿಸಿ ಸೆಪ್ಚೆಂಬರ್ ನಲ್ಲಿ ಅಂತಿಮ ವರ್ಷದ ಪರೀಕ್ಷೆಯನ್ನು ಮಾತ್ರ ನಡೆಸಲು ನಿರ್ಧರಿಸಿದೆ.
ಯುಜಿಸಿಯ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಚಿವ ಆದಿತ್ಯ ಠಾಕ್ರೆ ಅವರು, ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮಹಾ ಸಚಿವರ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
Follow us on Social media