ಬೆಂಗಳೂರು: ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯದಲ್ಲಿ ಸದ್ಯ ಅಸ್ತಿತ್ವದಲ್ಲಿರುವ 5,800 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.
ಜಿಲ್ಲಾಧಿಕಾರಿಗಳು ಕೊಟ್ಟಿದ್ದ ಅಭಿಪ್ರಾಯದಂತೆ ಅಕ್ಟೋಬರ್ ತಿಂಗಳಿನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ಹೈಕೋರ್ಟ್ ಗಮನಕ್ಕೆ ಆಯೋಗ ತಂದಿದೆ.
ಅದರಂತೆ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ -2020 ಮತದಾರರ ಪಟ್ಟಿಗೆ ಕಾರ್ಯಕ್ರಮ ಸಿದ್ಧಪಡಿಸಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.
Follow us on Social media