Breaking News

‘ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ’ – ತಮಿಳುನಾಡು ಬಿಜೆಪಿ ನಾಯಕಿ ರಾಜೀನಾಮೆ

ಚೆನ್ನೈ : ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ಅವರು ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

  • ಈ ಕುರಿತಿ ಟ್ವೀಟ್ ಮಾಡಿರುವ ಗಾಯತ್ರಿ, ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ, ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದೆ. ಇದರಿಂದಾಗಿ ನಾನು ಪಕ್ಷ ತೊರೆಯುತ್ತಿದ್ದೇನೆ ಎಂದಿದ್ದಾರೆ.ಇನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿರುವ ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಗಾಯತ್ರಿ ರಘುರಾಮ್‌ ಗಂಭೀರ ಆರೋಪ ಮಾಡಿದ್ದು, ಅಣ್ಣಾಮಲೈ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ, 6 ತಿಂಗಳು ಅಮಾನತು ಮಾಡಿ ಪಕ್ಷದಿಂದ ದೂರವಿರಿಸಿದರು ಎಂದು ಆರೋಪಿಸಿದ್ದಾರೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×