ಮುಂಬೈ: ಕೊರೋನಾ ಸೋಂಕಿಗೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಆರೋಗ್ಯ ಸ್ಥಿರವಾಗಿದ್ದು, ಸೌಮ್ಯ ಲಕ್ಷಣಗಳು ಕಂಡು ಬಂದಿವೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಮಿತಾಭ್ ಹಾಗೂ ಅಭಿಷೇಕ್ ಬಚ್ಚನ್ ಇಬ್ಬರನ್ನೂ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದೀಗ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮಾಹಿತಿ ನೀಡಿದ್ದು, ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ಸೌಮ್ಯ ಲಕ್ಷಣಗಳಷ್ಟೇ ಕಂಡು ಬಂದಿದೆ. ಪ್ರಸ್ತುತ ಆಸ್ಪತ್ರೆಯ ಐಸೋಲೇಷನ್ ಘಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಶನಿವಾರ ರಾತ್ರಿ 10.30ರ ವೇಳೆಗೆ ಅಮಿತಾಭ್ ಅವರಿಗೆ ಕೊರೋನಾ ವೈರಸ್ ಇದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಬಳಿಕ ಕೆಲವೇ ಕ್ಷಣಗಳಲ್ಲಿ ಸ್ವತಃ ಟ್ವೀಟ್ ಮಾಡಿದ್ದ ಅಮಿತಾಭ್ ಬಚ್ಚನ್ ಅವರು ಕೊರೋನಾ ಇರುವುದನ್ನು ದೃಢಪಟಿಸಿದ್ದರು.
ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಧಿಕಾರಿಗಳಿಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ. ಕುಟುಂಬ ಹಾಗೂ ಸಿಬ್ಬಂದಿ ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ. ಅವರ ವರದಿಗಾಗಿ ಗಾಯುತ್ತಿದ್ದೇವೆ. ಕಳೆದ 10 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದರು.
ಇನ್ನು ಬಚ್ಚನ್ ಅವರಿಕೆ ಕೊರೋನಾ ಸೋಂಕು ದೃಢಪಡುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಚಿತ್ರೋದ್ಯಮಕ್ಕೆ ಆಘಾತವಾಂತಾಗಿದೆ.
Follow us on Social media