ಶಿವಮೊಗ್ಗ: ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ. ಅದನ್ನು ಮಾಡಿಯೇ ತೀರುತ್ತೇವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಪ್ರಯುಕ್ತ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಏರ್ಪಡಿಸಿದ್ದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಕಾಶಿ ವಿಶ್ವನಾಥ, ಮಥುರಾ ಶ್ರೀಕೃಷ್ಣ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ತೆರಳಿದರೆ ಹಿಂದೂಗಳ ಗುಲಾಮತನ ಭಾಸವಾಗುತ್ತದೆ.
ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲು ಆಗದಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿನ ಹಲವು ದೇವಸ್ಥಾನಗಳು ಧ್ವಂಸವಾಗಿವೆ. ಗುಲಾಮಗಿರಿಯ ಸಂತೇತವಾದ ಅಯೋಧ್ಯೆಯ ಮಸೀದಿ ತೆರವುಗೊಳಿಸಿದಂತೆ ಅಲ್ಲಿನ ಮಸೀದಿಗಳನ್ನು ತೆರವುಗೊಳಿಸಬೇಕಿದೆ. ಎಲ್ಲಾ ಶ್ರದ್ಧಾ ಕೇಂದ್ರಗಳೂ ಮಸೀದಿಗಳಿಂದ ಮುಕ್ತವಾಗಬೇಕಿದೆ ಎಂದು ಈಶ್ವರಪ್ಪ ಪ್ರತಿಪಾದಿಸಿದ್ದಾರೆ.
Follow us on Social media