ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರಾಗದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಅವಂತಿಪೋರಾದ ತ್ರಾಲ್’ನ ಛೆನಾ ಉಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಎನ್’ಕೌಂಟರ್ ಆಗಿ ಮಾರ್ಪಡಿಸಿದ ಭದ್ರತಾಪಡೆಗಳು ಇದೀಗ ಓರ್ವ ಉಗ್ರನ್ನು ಹತ್ಯೆ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
Follow us on Social media